ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಸ್ವಚ್ಛ ಭಾರತ್ ಮಿಷನ್, ಕಟಪಾಡಿ ಗ್ರಾಮ ಪಂಚಾಯತ್, ಡಾ. ಶ್ರೀ ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನದ ಸಹಯೋಗದಲ್ಲಿ ಕಟಪಾಡಿ ಪೇಟೆ ಬಳಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಬಿ ಶೆಟ್ಟಿ, ಉಪಾಧ್ಯಕ್ಷೆ ಸುಗುಣಾ, ಕಟಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಮತಾ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಸ್ಥಳೀಯರು ಉಪಸ್ಥಿತರಿದ್ದರು.