Thursday, April 16, 2026

ಬ್ರಹ್ಮಾವರ: ಬಿಜೆಪಿಯ ಅಪಪ್ರಚಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Must read

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಪಂ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಜನಪರವಾದ ಆಡಳಿತವನ್ನು ನೀಡುತ್ತಿದೆ. ಆದರೆ ಬಿಜೆಪಿ ಕಾಂಗ್ರೆಸ್ ಸರಕಾರದ ಬಗ್ಗೆ ಅಪಪ್ರಚಾರ ಮಾಡುತ್ತಾ, ಸುಳ್ಳು ಹೇಳಿಕೊಂಡು ಜನರ ದಿಕ್ಕು ತಪ್ಪಿಸುವ ಕೆಲಸ‌ ಮಾಡುತ್ತಿದೆ ಎಂದು ದೂರಿದರು.
ಪಂಚ ಗ್ಯಾರಂಟಿ ಯೋಜನೆ ಮೂಲಕ ಉತ್ತಮ ಆಡಳಿತ ನೀಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ಪ್ರಪಂಚದಲ್ಲೇ ಉತ್ತಮ ಸರಕಾರ ಎಂಬ ಹೆಗ್ಗಳಿಕೆ ಪಡೆದಿದೆ. 40 ಪರ್ಸೆಂಟ್ ಕಮಿಷನ್ ಹೊಡೆದು ಕರ್ನಾಟಕ ರಾಜ್ಯವನ್ನು ದಿವಾಳಿ ಮಾಡಿದ್ದು ಹಿಂದಿನ ಬಿಜೆಪಿ ಸರಕಾರ. ಆದರೆ, ಮುಂದಿನ ಚುನಾವಣೆಯಲ್ಲಿ ಸೋಲುವ ಭಯದಲ್ಲಿ ಬಿಜೆಪಿ ಸುಳ್ಳು ಹೇಳಿಕೊಂಡು ಜನರಿಗೆ ತಪ್ಪು ಸಂದೇಶ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ಶಾಸಕರು ಪ್ರಾಧಿಕಾರ, ತಾಲೂಕು ಕಚೇರಿಯಲ್ಲಿ ಜನರ ಕೆಲಸ ಆಗುತ್ತಿಲ್ಲ ಎಂದು ಹೇಳುತ್ತಾರೆ. ಜನರು ನಿಮಗೆ ಆಶೀರ್ವದಿಸಿ ವಿಧಾನಸಭೆಗೆ ಕಳುಹಿಸಿದ್ದಾರೆ‌. ಶಾಸಕರು ಇಲ್ಲಿನ ಜನರ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಬೇಕಿತ್ತು. ಅದನ್ನು ಬಿಟ್ಟು ಕೋಳಿ ಅಂಕ ನಡೆಸಲು ಅವಕಾಶ ಕೊಡಿ, ಸ್ನೇಹಿತನಿಗೆ ಮಲ್ಪೆಯಲ್ಲಿ ಪ್ರಸೋದ್ಯಮಕ್ಕೆ ಲೈಸನ್ಸ್ ಕೊಡಿ ಎಂದು ಹೇಳುತ್ತಾರೆ. ನಿಮಗೆ ಜನರ ಬಗ್ಗೆ ಕಾಳಜಿ ಇಲ್ಲವೇ. ಕೆಲಸ ಆಗದಿದ್ದರೆ ವಿಧಾನಸಭೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಕೂಡ ನಿಮಗೆ ಇದೆ. ಆದರೆ ನೀವು ನಿಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ‌. ಉಡುಪಿ ಜಿಲ್ಲೆಯ ಹೆಸರನ್ನು ಮೂರು ಕಾಸಿಗೆ ಹರಾಜು ಹಾಕಿದ ನಿಮಗೆ ಕಾಂಗ್ರೆಸ್ ಅನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಶಾಸಕರೇ, ನೀವು ನಿಮ್ಮ ನಡುವಳಿಕೆಯನ್ನು ಸರಿಮಾಡಿಕೊಂಡು ಜನರ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಮಾಡಿ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಮ್ಮ ಮನೆ, ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ. ನಿಮ್ಮ ನೈಜ ಸ್ಥಿತಿಯನ್ನು ಜನರಿಗೆ ತೋರಿಸಿಕೊಡುತ್ತೇವೆ ಎಂದು ಗುಡುಗಿದ್ರು.

ಮಾಜಿ ಸಚಿವ ಕೆ‌. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ರಾಜ್ಯ ಸರಕಾರ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಬಿಜೆಪಿಯವರು ಅಭಿವೃದ್ಧಿ ಆಗುತ್ತಿಲ್ಲ ಎನ್ನುತ್ತಾರೆ. ಬಿಜೆಪಿ ಸುಳ್ಳು ಹೇಳಿಕೊಂಡು ಬರುವ ಕಡೆ ನಾವು ಸತ್ಯ ತಿಳಿಸುವ ಕೆಲಸ ಮಾಡಬೇಕು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಅಮೃತ ಶೆಣೈ, ಕೀರ್ತಿ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ, ಬ್ಲಾಕ್ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ,ಮಾಜಿ ಜಿಪಂ ಸದಸ್ಯರಾದ ಭುಜಂಗ ಶೆಟ್ಟಿ, ಗೋಪಿ ಕೆ ನಾಯ್ಕ್, ಹಿರಿಯ ಮುಖಂಡರಾದ ಮೈರ್ಮಾಡಿ ಸುಧಾಕರ್ ಶೆಟ್ಟಿ ಸ್ಥಳೀಯ ನಾಯಕರಾದ ಪ್ರಶಾಂತ್ ಸುವರ್ಣ, ಮಹೇಶ್ ಮೊಯಿಲಿ, ನವೀನ್ ಬಂಗೇರ ಉದಯ್ ಆಚಾರ್ಯ, ಭುವನೇಶ್ ಕರ್ಜೆ, ಹರೀಶ್ ಶೆಟ್ಟಿ ಕರ್ಜೆ, ಕುಮಾರ್ ಸುವರ್ಣ, ಸೂರ್ಯ ಸಾಲಿಯಾನ್ ಉಪಸ್ಥಿತರಿದ್ದರು

spot_img

More articles

LEAVE A REPLY

Please enter your comment!
Please enter your name here