Saturday, March 21, 2026

ಯುವ ವೈದ್ಯೆ ನೇಣಿಗೆ ಶರಣು: ಕಾರಣ ನಿಗೂಢ!

Must read

ಮಂಗಳೂರು: ಯುವ ವೈದ್ಯೆಯೋರ್ವಳು‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪುತ್ತೂರಿನ ಬಪ್ಪಳಿಗೆ ನಿವಾಸಿ ಚಾಟರ್ಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಕೀರ್ತನಾ ಜೋಶಿ (27) ಆತ್ಮಹತ್ಯೆಗೆ ಶರಣಾದ ವೈದ್ಯೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು, ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಪಶುವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿರುವ ಡಾ| ಕೀರ್ತನಾ ಜೋಶಿ ಅವರು ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅವರು ಸೋಮವಾರ ತಡರಾತ್ರಿ ಸ್ವಗೃಹದಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಅವರನ್ನು ಅಗಲಿದ್ದಾರೆ.

spot_img

More articles

LEAVE A REPLY

Please enter your comment!
Please enter your name here