Thursday, September 19, 2024

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಸಾವು

Must read

ಕುಂದಾಪುರ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಂದಾಪುರದ‌ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (42) ಯಾನೆ ಬನ್ಸ್ ರಾಘು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.

ನಿನ್ನೆ ರಾತ್ರಿ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ರಾಘವೇಂದ್ರ ಹಾಗೂ ಅಪರಿಚಿತ ವ್ಯಕ್ತಿ ನಡುವೆ ಗಲಾಟೆಯಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿಯು ರಾಘವೇಂದ್ರ ಅವರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ರಾಘವೇಂದ್ರ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ರಾಘವೇಂದ್ರ ಸಣ್ಣಪುಟ್ಟ ಗಲಾಟೆಗಳಲ್ಲಿ ಭಾಗಿಯಾಗುತ್ತಿದ್ದನು ಎನ್ನಲಾಗಿದೆ. ಇದೇ ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ರಾಘು ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ. ಆರೋಪಿ ಶಿವಮೊಗ್ಗ ಮೂಲದವನೆಂದು ತಿಳಿದುಬಂದಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here