Sunday, January 11, 2026

‘ಹರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’

Must read

ಉಡುಪಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.
ಉಡುಪಿ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಲ್ಲಿರುವ ದಿ! ಕರಂಬಳ್ಳಿ ಸಂಜೀವ ಶೆಟ್ಟಿ ಅವರ ಪ್ರತಿಮೆಗೆ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾಲಾರ್ಪಣೆಗೈದರು. ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಪ್ರತಿಮೆಗೆ ಪುಷ್ಪಾರ್ಚನೆಗೈಯುವ ಮೂಲಕ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷೆ ಸುಮಾ ಯು. ಶೆಟ್ಟಿ, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಿ. ಶೆಟ್ಟಿ, ಸರೋಜಾ ಶೆಣೈ, ಪ್ರಮುಖರಾದ ಗೀತಾಂಜಲಿ ಎಮ್. ಸುವರ್ಣ, ವೀಣಾ ಎಸ್. ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಗಿರಿಧರ್ ಆಚಾರ್ಯ, ನಗರಸಭಾ ಸದಸ್ಯರು, ಮಹಿಳಾ ಮೋರ್ಚಾ ಜಿಲ್ಲಾ, ಉಡುಪಿ ನಗರ, ಗ್ರಾಮಾಂತರ ಮತ್ತು ಕಾಪು ಮಂಡಲದ ಪದಾಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಮಹಿಳಾ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.
‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಿಟ್ಟೂರು-ಅಂಬಾಗಿಲು ಜಂಕ್ಷನ್ ನಿಂದ ಪ್ರಾರಂಭಗೊಂಡು ಕಲ್ಸoಕ, ಕಡಿಯಾಳಿ, ಶಾರದಾ ಮಂಟಪ ಮಾರ್ಗವಾಗಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಸಮಾಪನಗೊಂಡಿತು.

spot_img

More articles

LEAVE A REPLY

Please enter your comment!
Please enter your name here