Monday, January 12, 2026

ಉಡುಪಿ ಜಿಲ್ಲಾ ಜ್ಯೂನಿಯರ್ ಅಥ್ಲೆಟಿಕ್ ಮೀಟ್ ಉದ್ಘಾಟನೆ

Must read

ಉಡುಪಿ: ಉಡುಪಿ ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿ ಯೇಶನ್ ವತಿಯಿಂದ ಉಡುಪಿ ಜಿಲ್ಲಾ ಕಿರಿಯರ ಕ್ರೀಡಾಕೂಟ ಶನಿವಾರ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.
ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಮಣಿಪಾಲ ವಿಕೆ ಗ್ರೂಪ್‌ನ ಅಧ್ಯಕ್ಷ ಕೆ.ಎಂ.ಶೆಟ್ಟಿ ದೀಪ ಬೆಳಗಿಸಿದರು. ಅಧ್ಯಕ್ಷತೆಯನ್ನು ಜಿಲ್ಲಾ ಅಮೆಚ್ಯುರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು.
ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಮಹೇಶ್ ಠಾಕೂರು, ಲಯನ್ಸ್ ಜಿಲ್ಲಾ ಗವರ್ನರ್ ಸ್ವಪ್ನಾ ಸುರೇಶ್, ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮುಖ್ಯ ಅತಿಥಿಗಳಾಗಿದ್ದರು.
ವೇದಿಕೆಯಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಉಡುಪಿ ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಜನ್ ಕೆ.ಜಿ., ಅಸೋಸಿಯೇಶನ್ ಕೋಶಾಧಿಕಾರಿ ನಾರಾಯಣ ಪ್ರಭು ಉಪಸ್ಥಿತರಿದ್ದರು.
ಅಸೋಸಿಯೇಶನ್ ಕಾರ್ಯದರ್ಶಿ ದಿನೇಶ್ ಕುಮಾರ್ ಎ. ಸ್ವಾಗತಿಸಿದರು. ರಾಮಚಂದ್ರ ಪಾಟ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು. 14 ವರ್ಷ ಕೆಳಗಿನ, 16 ವರ್ಷ ಕೆಳಗಿನ, 18 ವರ್ಷ ಕೆಳಗಿನ ಹಾಗೂ 20 ವರ್ಷ ಕೆಳಗಿನ ವಿಭಾಗ ಗಳಲ್ಲಿ ಒಟ್ಟು 350 ಕ್ರೀಡಾಪಟುಗಳು ಭಾಗವಹಿಸಿದ್ದರು.

spot_img

More articles

LEAVE A REPLY

Please enter your comment!
Please enter your name here