Saturday, September 19, 2026

ಮಣಿಪಾಲ: ಹೋಟೆಲ್ ಬಾರ್ ಉದ್ಯಮಿ ಕೃಷ್ಣರಾಜ್ ಹೆಗ್ಡೆ ಆತ್ಮಹತ್ಯೆ

Must read

ಉಡುಪಿ: ಮಣಿಪಾಲ ಈಶ್ವನಗರದ ಡೌನ್ ಟೌನ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಪಾಲುದಾರ ಕಾರ್ಕಳ ಬೈಲೂರಿನ ನಿವಾಸಿ ಕೃಷ್ಣರಾಜ್ ಹೆಗ್ಡೆ (45)ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ರಾಡಿಯ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿ-ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು, ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಬೈಲೂರಿನಲ್ಲಿ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಸಕ್ರಿಯರಾಗಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here