Thursday, September 19, 2024

ಗಾಂಧೀಜಿಯ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು: ಶಾಸಕ ಯಶ್‌ಪಾಲ್ ಸುವರ್ಣ

Must read

ಉಡುಪಿ: ಗಾಂಧೀಜಿಯವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಉಡುಪಿ ಇವರ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ, ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಅಜ್ಜರಕಾಡುವಿಗೆ ಭೇಟಿ ನೀಡಿ, ಈ ಭಾಗದ ಜನರನ್ನು ಒಂದೆಡೆ ಸೇರಿಸಿ, ಸ್ವಾತಂತ್ರ್ಯದ ಕುರಿತು ಕಾರ್ಯಕ್ರಮ ಆಯೋಜಿಸಿದ್ದರು. ಅದರ ನೆನಪಿಗಾಗಿ ಇಲ್ಲಿ ಗಾಂಧೀಜಿಯವರ ಪುತ್ಥಳಿಯನ್ನು ಈ ಪಾರ್ಕಿನಲ್ಲಿ ನಿರ್ಮಾಣ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಕುಟುಂಬವನ್ನು ತೊರೆದು ದೇಶದ ಮೂಲೆಮೂಲೆಗಳಲ್ಲಿ ಸಂಚರಿಸಿ, ಜನರನ್ನು ಒಗ್ಗೂಡಿಸಿ, ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿಸುವುದರೊಂದಿಗೆ ಅವರು ಭೇಟಿ ನೀಡಿದ ಸ್ಥಳಗಳಲ್ಲಿ ಸ್ವತಃ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ ಎಂದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ, ಪ್ರೌಢಶಾಲಾ ವಿಭಾಗ, ಪದವಿ ಪೂರ್ವ ಶಿಕ್ಷಣ ವಿಭಾಗ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಒಟ್ಟು ಮೂರು ವಿಭಾಗಗಳಲ್ಲಿ ಆಯೋಜಿಸಲಾದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ರಕ್ಷಿತಾ, ಶ್ರೇಯಾ ಹಾಗೂ ರಶ್ಮಿ, ಪದವಿ ಪೂರ್ವ ಶಿಕ್ಷಣ ವಿಭಾಗದ ದಿವ್ಯಾ, ಸೌಜನ್ಯ ಹಾಗೂ ದಕ್ಷಾ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಸ್ವಪ್ನ ಶೇಟ್, ಹರ್ಷಿತಾ ಯು ಶೆಟ್ಟಿ ಹಾಗೂ ಅನುಷಾ ಕೆ ಪೂಜಾರಿ ಅವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ನಗರಸಭೆ ಪೌರಾಯುಕ್ತ ರಾಯಪ್ಪ, ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಕೆ, ರಶ್ಮಿ ಭಟ್, ಜಯಂತಿ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here