Monday, March 16, 2026

ಕಾಪು: ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತ- ಖ್ಯಾತ ಡಿಜೆ ಮರ್ವಿನ್ ಮೃತ್ಯು

Must read

ಉಡುಪಿ: ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಮೂಳೂರು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಪ್ರಜ್ವಲ್ ಮತ್ತು ಪ್ರಸಾದ್ ಗಾಯಗೊಂಡವರು.ಗಾಯಾಳು ಗಳನ್ನು ಉಡುಪಿ ಆಸ್ಪತ್ರೆಗೆ ಉಚ್ಚಿಲ ಆ್ಯಂಬುಲೆನ್ಸ್ ನ ಜಲಾಲುದ್ದೀನ್, ಹಮೀದ್, ಕೆ ಎಂ ಸಿರಾಜ್ ಮತ್ತು ಅನ್ವರ್ ಕೋಟೇಶ್ವರ ಸಾಗಿಸಿದರು.
ಉಡುಪಿ, ಮಂಗಳೂರಿನ ಪ್ರಸಿದ್ದ ಡಿಜೆಯಾಗಿದ್ದ ಮರ್ವಿನ್ ಮೆಂಡೋನ್ಸಾ ಹಲವಾರು ಕೊಂಕಣಿ ಮ್ಯೂಸಿಕ್ ವಿಡಿಯೋಗಳನ್ನು ಕೂಡಾ ನಿರ್ದೇಶನ ಮಾಡಿದ್ದರು. ನಿನ್ನೆಯಷ್ಟೇ ಅವರ ಹೊಸ ಕೊಂಕಣಿ ಮ್ಯೂಸಿಕ್ ವಿಡಿಯೋ ಬಿಡುಗಡೆ ಆಗಿತ್ತು.

spot_img

More articles

LEAVE A REPLY

Please enter your comment!
Please enter your name here