ಉಡುಪಿ: ಕಾರ್ಕಳ ಕುಂಟಲಪಾಡಿ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂಬವರನ್ನು ಇರಿದು ಕೊಲೆ ಮಾಡಲಾಗಿದೆ. ಈ ಘಟನೆ ಇಂದು ಬೆಳಕಿಗೆ ಬಂದಿದ್ದು, ಕಾರ್ಕಳ ನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.
ಮೂಲಗಳ ಪ್ರಕಾರ, ನವೀನ್ ಪೂಜಾರಿ ಕಾರ್ಕಳದಲ್ಲಿ ನೆಲೆಸಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಹರಿರಾಮ್ ಶಂಕರ್, ಎಎಸ್ ಪಿ ಡಾ. ಹರ್ಷಪ್ರಿಯಂವದ ಮೊದಲಾದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು
ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ
More articles

