Thursday, March 19, 2026

ಬನ್ನಂಜೆ ನಾರಾಯಣಗುರು ವೃತ್ತ ತೆರವು: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಆಕ್ರೋಶ

Must read

ಉಡುಪಿ: ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ ಮಧ್ಯೆ ಎಸೆಯಲಾಗಿದೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್‌ ಆಫ್ ಬರೋಡ ನಾಮಫಲಕದ ವೃತ್ತ ರಚಿಸಿದ್ದು, ಇದು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ತೋರಿದ ದೊಡ್ಡ ಅಗೌರವ. ಇದನ್ನು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ತೀವ್ರವಾಗಿ ಖಂಡಿಸಿದೆ.
ಸ್ಥಳೀಯಾಡಳಿತ ತಕ್ಷಣ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಸಮಸ್ತ ಬಿಲ್ಲವ ಸಮಾಜವನ್ನು ಒಗ್ಗೂಡಿಸಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್‌ ಎಮ್. ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here