Saturday, March 21, 2026

ಉಡುಪಿ: ಟ್ರಕ್- ಬೈಕ್ ನಡುವೆ ಭೀಕರ ಅಪಘಾತ- ದೆಂದೂರುಕಟ್ಟೆಯ ಯುವಕ ಸ್ಥಳದಲ್ಲೇ ಮೃತ್ಯು

Must read

ಉಡುಪಿ: ಟ್ರಕ್ ನ ಚಕ್ರದಡಿಗೆ ಸಿಲುಕಿ ಬೈಕ್ ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಅಪಘಾತದ ರಭಸಕ್ಕೆ ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ. ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಸಾವರನನ್ನು ಟ್ರಕ್ ಎಳೆದುಕೊಂಡು ಹೋಗಿದೆ.
ಮೃತನನ್ನು ದೆಂದೂರುಕಟ್ಟೆಯ ಪ್ರದೀಪ (38) ಎಂದು ಗುರುತಿಸಲಾಗಿದೆ. ಈತ ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ‌ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿದ್ದು ಸಂಚಾರಿ ಪೋಲಿಸ್ ಅಧಿಕಾರಿಗಳು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ಇಲಾಖೆಗೆ‌ ನೆರವಾದರು

spot_img

More articles

LEAVE A REPLY

Please enter your comment!
Please enter your name here