ಉಡುಪಿ: ಶಾಲಾ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ. ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದ ಅಮೃತ ಭಾರತಿ ಶಾಲೆಯ ಬಸ್, ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಮೇತ ರಸ್ತೆ ಅಪ್ಪಳಿಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ. ಗಾಯಗೊಂಡ ಸುದರ್ಶನ್ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೆರ್ಡೂರು: ಬೈಕ್ ಗೆ ಶಾಲಾ ಬಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು
More articles

