ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.
ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಮದುವೆಗೆ ಒಪ್ಪದ ಯುವತಿಗೆ ಚೂರಿ ಇರಿದ ಯುವಕ
More articles

