ಉಡುಪಿ: ಮದುವೆಗೆ ಒಪ್ಪದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದು ಪರಾರಿಯಾದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ.
ಆರೋಪಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾಳೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಮದುವೆಗೆ ಒಪ್ಪದ ಯುವತಿಗೆ ಚೂರಿ ಇರಿದ ಪ್ರಕರಣ: ಚಿಕಿತ್ಸೆ ಫಲಿಸದೆ ಯುವತಿ ಮೃತ್ಯು
More articles

