ಮಲ್ಪೆ: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವತಿಯಿಂದ ನಿರ್ಮಾಣಗೊಳ್ಳಲಿರುವ ನೂತನ ಸಮುದಾಯ ಭವನಕ್ಕೆ ಸೆ. 22ರ ಸೋಮವಾರ ಬೆಳಿಗ್ಗೆ 9.30ಕ್ಕೆ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶೀಲಾನ್ಯಾಸ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ವಹಿಸಲಿರುವರು.
ಮುಖ್ಯ ಅತಿಥಿಗಳಾಗಿ ಪ್ರಮುಖ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 7ಗಂಟೆಗೆ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಜರಗಲಿದೆ. ನವರಾತ್ರಿಯ ಪ್ರತಿದಿನವು ಚಂಡಿಕಾ ಹೋಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
ಸೆ.22ರಂದು ಕೊಡವೂರು ಶಂಕರನಾರಾಯಣ ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ
More articles

