Thursday, September 19, 2024

ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸಿಗೆ ಜಯ ಖಚಿತ: ಸಚಿವ ಮಂಕಾಳ ವೈದ್ಯ

Must read

ಉಡುಪಿ: ಮುಂಬರುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರ ಸಹಕಾರ ಅಗತ್ಯ. ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಜಯಗಳಿಸಲಿದೆ. ಪಕ್ಷ ಬಲವರ್ಧನೆಗೊಳಿಸಲು ಯುವಕರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ವೀಕ್ಷಕರಾಗಿ ಆಗಮಿಸಿದ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಹೇಳಿದರು.

ಕೋಟೇಶ್ವರದ ಸಹನಾ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಮಾತನಾಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಪ್ರ. ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್, ಮುಖಂಡರಾದ ಎಮ್ .ಎ . ಗಪೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ವಿಕಾಸ್ ಹೆಗ್ಗಡೆ, ಮದನ್ ಕುಮಾರ್, ಕುಶಲ ಶೆಟ್ಟಿ, ಭುಜಂಗ ಶೆಟ್ಟಿ, ದಿನಕರ ಹೇರೂರು, ಸದಾಶಿವ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here