ಉಡುಪಿ: ರಾಜ್ಯದಲ್ಲಿ ಸೆ. 2ರಿಂದ ಆರಂಭಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು ನಿಗದಿತ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಅಕ್ಟೋಬರ್ ಹದಿನೆಂಟನೇ ತಾರೀಕಿನ ಒಳಗೆ ಬಾಕಿ ಇರುವ ಎಲ್ಲಾ ಸಮೀಕ್ಷೆ ಕಾರ್ಯಗಳನ್ನು ಮುಗಿಸಲು ಸೂಚನೆ ನೀಡಲಾಗಿದೆ.
ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.
ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.
ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು.
ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲುಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.
GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ತಿಳಿಸಿದರು.
