Home ಕರಾವಳಿ ಬಿಗ್‌ ಬಾಸ್‌ ಮನೆಗೆ ಬೀಗ: ಅಧಿಕಾರಿಗಳಿಂದ ಜಾಲಿವುಡ್ ಸ್ಟುಡಿಯೋ ಸೀಜ್

ಬಿಗ್‌ ಬಾಸ್‌ ಮನೆಗೆ ಬೀಗ: ಅಧಿಕಾರಿಗಳಿಂದ ಜಾಲಿವುಡ್ ಸ್ಟುಡಿಯೋ ಸೀಜ್

ಬೆಂಗಳೂರು: ಕೆಲವೇ ದಿನಗಳ ಹಿಂದೆ ಶುರುವಾಗಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ದೊಡ್ಡ ಸಂಕಷ್ಟ ಎದುರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ರಾಮನಗರ ತಹಶೀಲ್ದರ್ ತೇಜಸ್ವಿನಿ ಅವರ ಜೊತೆ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಅಧಿಕಾರಿಗಳು ಜಾಲಿವುಡ್​​ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಜಾಲಿವುಡ್​ ಸ್ಟುಡಿಯೋಸ್​ ಇದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ರಾಮನಗರ ತಹಶೀಲ್ದಾರ್​ ಹಾಗೂ ಪೊಲೀಸರ ಸಮ್ಮುಖದಲ್ಲಿ ಬೀಗ ಜಡಿಯಲಾಗಿದೆ.

Exit mobile version