Saturday, January 10, 2026

ಉಡುಪಿ: ನೇಣಿಗೆ ಶರಣಾದ ಯುವಪ್ರೇಮಿಗಳು !

Must read

ಉಡುಪಿ: ಯುವಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ಯುವತಿ ವಾಸವಾಗಿರುವ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಪ್ರಗತಿಯಲ್ಲಿದೆ. ಮೃತ ಯುವತಿ ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ ವಲಸೆ ಕಾರ್ಮಿಕ ಮಲ್ಲೇಶ (23) ಎಂದು ತಿಳಿದುಬಂದಿದೆ.

ನಗರ ಪೋಲಿಸ್ ಠಾಣೆಯ‌ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್ ಐ ರಮೇಶ್, ಮುಖ್ಯ ಆರಕ್ಷಕ ಜಯಕರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ‌ ಒಳಕಾಡು ಎರಡು ಮೃತದೇಹಗಳನ್ನು ನೇಣುಕುಣಿಕೆಯಿಂದ ತೆರವುಗೊಳಿಸಿ ಅಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೋಲಿಸ್ ಇಲಾಖೆಗೆ ನೆರವು ನೀಡಿದರು.ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

spot_img

More articles

LEAVE A REPLY

Please enter your comment!
Please enter your name here