ಉಡುಪಿ: ಭಾನುವಾರದಿಂದ ನಾಪತ್ತೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಶವವಾಗಿ ಪತ್ತೆಯಾದ ಘಟನೆ ಪೆರ್ಡೂರು ಅಲಂಗಾರು ಬಳಿಯ ನದಿಯಲ್ಲಿ ಇಂದು ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪೆರ್ಡೂರು ನಿವಾಸಿ ಶ್ರೀಶನ್ ಶೆಟ್ಟಿ (15) ಎಂದು ಗುರುತಿಸಲಾಗಿದೆ. ಈತ ಹಿರಿಯಡಕದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ತನ್ನ ಸ್ನೇಹಿತನೊಂದಿಗೆ ಅಲಂಗಾರು ಬಳಿಯ ನದಿಗೆ ಈಜಲು ಹೋಗಿದ್ದನು. ಈ ವೇಳೆ ಶ್ರೀಶನ್ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
