ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ನವೆಂಬರ್ 7ರಂದು ಮಿಜೋರಾಂ ವಿಧಾನಸಭೆ ಚುನಾವಣೆ ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಚುನಾವಣೆ ನಿಗದಿಯಾಗಿದೆ. ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆ ಡಿಸೆಂಬರ್ 3ರಂದು ನಡೆಯಲಿದೆ.