Monday, January 12, 2026

ಉಡುಪಿ: ಯಕ್ಷಗಾನ ವೇಷಧಾರಿ ಹೃದಯಾಘಾತದಿಂದ ನಿಧನ

Must read

ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದವರು. ಬುಧವಾರ ರಾತ್ರಿ ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಈ ವೇಳೆ ಅವರು ಕೊನೆ ಉಸಿರುಎಳೆದಿದ್ದರು.
ಅವರ ತಂದೆ ಕೂಡ ಯಕ್ಷಗಾನ ಕಲಾವಿದರಾಗಿದ್ದಾರೆ. ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here