ಉಡುಪಿ: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಹಡಗುಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸಪ್ ಮೂಲಕ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಬಂಧಿತ ಆರೋಪಿ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
