Home Uncategorized ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಉಡುಪಿ ನಗರ ಠಾಣೆ, ಮಲ್ಪೆ ಠಾಣೆ, ಮಣಿಪಾಲ ಠಾಣಾ ವ್ಯಾಪ್ತಿಯ...

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ: ಉಡುಪಿ ನಗರ ಠಾಣೆ, ಮಲ್ಪೆ ಠಾಣೆ, ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ
ನವೆಂಬರ್ 28ರಂದು ಉಡುಪಿ ನಗರ ಠಾಣಾ ವ್ಯಾಪ್ತಿ, ಮಲ್ಪೆ ಠಾಣಾ ವ್ಯಾಪ್ತಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಅವರು ಅದೇಶಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version