Sunday, November 24, 2024

ಸತ್ಯ ಸುದ್ದಿಗಳನ್ನು ಬಿತ್ತರಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಿ: ಸ್ವರ್ಣ ಭಟ್

Must read

ಉಡುಪಿ: ವಾಟ್ಸಪ್, ಫೇಸ್ ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ನಮ್ಮ ನಡುವೆ ಹೆಚ್ಚಾಗಿ ಶೇರ್ ಆಗುತ್ತಿದೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿವೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ರಾಜ್ಯ ಸಂಚಾಲಕಿ ಸ್ವರ್ಣ ಭಟ್ ಹೇಳಿದರು.

ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ನಡೆದ ಈ ದಿನ ನಾಗರಿಕ ಪತ್ರಕರ್ತರ ಸಮಾಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮಗೆ ಬರುವ ಸುದ್ದಿಗಳನ್ನು ಪರಾಮರ್ಶೆ ನಡೆಸದೆ ಶೇರ್ ಮಾಡುತ್ತಿದ್ದೇವೆ. ಇದರಿಂದಾಗಿ ಪರಸ್ಪರ ಸಂಬಂಧಗಳು ಹಾಳಾಗುತ್ತಿವೆ. ಮಾಧ್ಯಮಗಳು ಸುಳ್ಳುಗಳನ್ನು ಬಿತ್ತರಿಸದೇ ಸತ್ಯ ಸುದ್ದಿಗಳನ್ನು ಬಿತ್ತರಿಸುವ ಮೂಲಕ ಸಮಾಜದ ಕನ್ನಡಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಚಿಂತಕ ನಾಗೇಶ್ ಉದ್ಯಾವರ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ ವಿನ್ಸೆಂಟ್ ಆಳ್ವಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಸುಂದರ್ ಮಾಸ್ಟರ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಸದಸ್ಯರಾದ ಪೀರ್ ಸಾಹೇಬ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಸ್ ಮೀಡಿಯಾ ಫೌಂಡೇಶನ್ ನ ವ್ಯವಸ್ಥಾಪಕರಾದ ಉಮರ್ ಯು ಹೆಚ್ ವಹಿಸಿದ್ದರು. ಈದಿನ.ಕಾಮ್ ಕರಾವಳಿ ವಲಯ ವರದಿಗಾರ ಶಾರೂಕ್ ತೀರ್ಥಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

spot_img

More articles

LEAVE A REPLY

Please enter your comment!
Please enter your name here