Tuesday, March 31, 2026

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ “ಭಾರತ ಭಾಗ್ಯ ವಿಧಾತ” ಬಿರುದು ಪ್ರದಾನ

Must read

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಶ್ರೀಕೃಷ್ಣ ಮಠದ ವತಿಯಿಂದ ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುತ್ತಿಗೆ ಮಠದಿಂದ “ಭಾರತ ಭಾಗ್ಯ ವಿಧಾತ” ಬಿರುದು ನೀಡಿ ಸನ್ಮಾನಿಸಲಾಯಿತು.
ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು, ಬಿರುದು ನೀಡಿ ಸನ್ಮಾನಿಸಿದರು. ಕಾಶಿ ಕಾರಿಡಾರ್ ರೀತಿಯಲ್ಲಿ ಉಡುಪಿ ಕಾರಿಡಾರ್ ಅಭಿವೃದ್ಧಿ ಪಡಿಸುವಂತೆ ಅವರು ಮನವಿ ಮಾಡಿದರು.
ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು.
ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಅವರು, ಜನಸಂಘ ಮತ್ತು ಮತ್ತು ಬಿಜೆಪಿಯ ಉತ್ತಮ ಆಡಳಿತದ ಮಾದರಿಯ ಕರ್ಮಭೂಮಿ ಉಡುಪಿ ಎಂದು ಮೋದಿ ಬಣ್ಣಿಸಿದರು.

spot_img

More articles

LEAVE A REPLY

Please enter your comment!
Please enter your name here