Home ಅಪರಾಧ ಹಿಂದೂ ಸಮಾಜೋತ್ಸವಕ್ಕೆ ಆಗಮಿಸುತ್ತಿದ್ದ ಶರಣ್ ಪಂಪ್ ವೆಲ್ ಗೆ ತಡೆ: ಹೆಜಮಾಡಿಯಿಂದಲೇ ವಾಪಾಸ್ ಕಳುಹಿಸಿದ ಪೊಲೀಸರು

ಹಿಂದೂ ಸಮಾಜೋತ್ಸವಕ್ಕೆ ಆಗಮಿಸುತ್ತಿದ್ದ ಶರಣ್ ಪಂಪ್ ವೆಲ್ ಗೆ ತಡೆ: ಹೆಜಮಾಡಿಯಿಂದಲೇ ವಾಪಾಸ್ ಕಳುಹಿಸಿದ ಪೊಲೀಸರು

ಉಡುಪಿ: ಉಡುಪಿಯಲ್ಲಿ ಇಂದು ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಹಾಗೂ ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್‌ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. ಬಳಿಕ ಉಡುಪಿ ನ್ಯಾಯಾಲಯದಲ್ಲಿ ಷರತ್ತು ಬದ್ಧ ಜಾಮೀನು ಪಡೆದುಕೊಂಡಿದ್ದ ಶರಣ್‌ ಪಂಪ್‌ವೆಲ್‌ ಗೆ ಯಾವುದೇ ಪೂರ್ವಾನುಮತಿ ಇಲ್ಲದೆ ದ.ಕ. ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿತ್ತು. ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ.

ಶೌರ್ಯ ರಥಯಾತ್ರೆ ಉಡುಪಿ ಪ್ರವೇಶಿಸಿದ್ದು, ಸಂಜೆ ಉಡುಪಿ ಎಂಜಿಎಂ ಕಾಲೇಜಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದೆ. ಇದರಲ್ಲಿ ಭಾಗವಹಿಸಿದರೆ ಅವರನ್ನು ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಬಂಧಿಸುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಅವರು, ಹೆಜಮಾಡಿಯಿಂದ ವಾಪಸ್ಸು ಹೋಗಿರುವುದಾಗಿ ತಿಳಿದುಬಂದಿದೆ.

Exit mobile version