Thursday, January 8, 2026

ಕುಂದಾಪುರ: ಸರ್ಕಾರಿ ಬಸ್- ಟಿಪ್ಪರ್ ಮಧ್ಯೆ ಭೀಕರ ಅಪಘಾತ; ಮೂವರು ವಿದ್ಯಾರ್ಥಿಗಳು ಸಹಿತ ಹಲವರಿಗೆ ಗಂಭೀರ ಗಾಯ

Must read

ಉಡುಪಿ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ಸೋಮವಾರ ಸಂಜೆ ಸಂಭವಿಸಿದೆ..
ಕುಂದಾಪುರದಿಂದ ಆಜಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್‌ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

spot_img

More articles

LEAVE A REPLY

Please enter your comment!
Please enter your name here