Sunday, January 11, 2026

ಉಡುಪಿ: ಮರಳು, ಕಲ್ಲು ಸಾಗಾಟದ ಟಿಪ್ಪರ್‌ಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ: ಎಸ್ಪಿ ಹರಿರಾಂ ಶಂಕರ್

Must read

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಟಿಪ್ಪರ್ ಗಳ‌ ಆರ್ಭಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಪೊಲೀಸ್ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆ ವಾಹನಗಳಿಗೆ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್(ವೇಗ ನಿಯಂತ್ರಕ) ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ.
ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿಸಿ ಮರಳು, ಮಣ್ಣು, ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ವಾಹನಗಳಿಗೆ ಗರಿಷ್ಠ 60 ಕಿ.ಮೀ ವೇಗ ಮಿತಿಯ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಈ ವಾಹನಗಳು ಅತೀಯಾದ ವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದ ನಿರಂತರ ವಾಗಿ ಅಪಘಾತಗಳು ಸಂಭವಿಸುತ್ತಿದ್ದು, ಆದುದರಿಂದ ಇತ್ತೀಚೆಗೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಈ ನಿಯಮ ಪಾಲನೆಗಾಗಿ ಎಲ್ಲಾ ಲಾರಿ ಚಾಲಕ ಮಾಲಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ವಿಚಾರವಾಗಿ ಚಾಲಕರಿಗೆ ಯಾವುದೇ ಮಾಹಿತಿ ಕೊರತೆಯಾಗದಂತೆ ಜಾಗೃತಿ ಮೂಡಿಸಲು ಮುಂದಿನ ದಿನಗಳಲ್ಲಿ ಕರಪತ್ರಗಳನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದರು.
ಅದೇ ರೀತಿ ಬಸ್‌ಗಳಲ್ಲಿ ಬಾಗಿಲು ಅಳವಡಿಕೆ ಸಂಬಂಧಿಸಿದಂತೆ ಜ.20 ಕೊನೆಯ ದಿನಾಂಕವಾಗಿದ್ದು, ಆ ದಿನಾಂಕದ ನಂತರ ಬಾಗಿಲು ಇಲ್ಲದ ಬಸ್‌ಗಳಿಗೆ ದಂಡ ವಿಧಿಸಲಾಗುವುದು ಅಥವಾ ಬಸ್‌ಗಳನ್ನು ಮುಟ್ಟು ಗೋಲು ಹಾಕಿಕೊಳ್ಳಲಾಗುವುದು ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here