ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಮಣಿಪಾಲದ ಲಕ್ಷ್ಮೀನಗರ ಸುಧಾ ಫರ್ನಿಚರ್ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ (36) ಮೃತ ದುರ್ದೈವಿ. ಇವರು ತನ್ನ ಬೈಕ್ ನಲ್ಲಿ ಉಡುಪಿಯಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ರಿಯಲ್ ಎಸ್ಟೇಟ್ ಸಹಿತ ಹಲವು ಉದ್ಯಮದಲ್ಲಿ ತೊಡಗಿಕೊಂಡಿದ್ದ ಪ್ರವೀಣ್ ಕಳೆದ ಒಂದವರೇ ವರ್ಷದ ಹಿಂದೆಯಷ್ಟೇ ಯುವತಿಯೊರ್ವಳನ್ನು ಪ್ರೀತಿಸಿ ಮದುವೆ ಆಗಿದ್ದರು.
