Thursday, November 21, 2024

ಉಡುಪಿ: ಮಕ್ಕಳೊಂದಿಗೆ ತಾಯಿ ನಾಪತ್ತೆ

Must read

ಉಡುಪಿ: ತಾಲೂಕಿನ ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣು ಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4) ವಿನೊಂದಿಗೆ ನಾಪತ್ತೆಯಾಗಿದ್ದಾರೆ.

ಅಕ್ಟೋಬರ್ 6 ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು, ಬಳಿಕ ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತಮಿಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

spot_img

More articles

LEAVE A REPLY

Please enter your comment!
Please enter your name here