Sunday, November 24, 2024

ಉಡುಪಿ: ವಿಶ್ವ ಬಂಟರ ಸಮ್ಮೇಳನ – 2023ರ ಆಮಂತ್ರಣ ಪತ್ರಿಕೆ ಬಿಡುಗಡೆ

Must read

ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ.ಕ ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಹಾಗೂ 29ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನ – 2023ರ (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಆಮಂತ್ರಣ ಪತ್ರಿಕೆಯನ್ನು ಇಂದು ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬಂಟ ಸಮುದಾಯದ ಯುವಕ ಯುವತಿಯರಿಗೆ ಐಎಎಸ್, ಐಪಿಎಸ್, ಕೆಎಎಸ್ ನಂತಹ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಕೆಲಸ ಆಗಬೇಕಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಹಾಯವಾಗುವ ಯೋಜನೆಗಳನ್ನು ಬಂಟರ ಸಂಘ ರೂಪಿಸಬೇಕು ಎಂದರು.

ರಾಜ್ಯದ 3ಬಿ ಮೀಸಲಾತಿ ಪಟ್ಟಿಯಲ್ಲಿ ಬಂಟರಿಗೂ ಸೌಲಭ್ಯ ಪಡೆಯುವ ಅವಕಾಶ ಇದೆ. ಆದರೆ ಅದರ ಬಗ್ಗೆ ಅರಿವಿನ ಕೊರತೆಯಿಂದ ಬಂಟ ಸಮುದಾಯದ ಮಕ್ಕಳು ಈ ಅವಕಾಶದಿಂದ ವಂಚಿತರಾಗಿದ್ದಾರೆ ಹೇಳಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ್ ಶೆಟ್ಟಿ ಮಾತನಾಡಿ, ಅ.28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಅದಕ್ಕೂ ಮೊದಲು ಅಂದು ಬೆಳಿಗ್ಗೆ 8ಗಂಟೆಗೆ ವಿವಿಧ ಬಂಟರ ಸಂಘಟನೆಗಳು, ಕ್ರೀಡಾ ಪಟುಗಳು ಮತ್ತು ಬಂಟ ಸಮಾಜದವರು ನಗರದ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮೈದಾನದವರೆಗೆ ಮೆರವಣಿಗೆಯಲ್ಲಿ ಸಾಗಿ ಬರಲಿದ್ದಾರೆ. ಅ.29ರಂದು ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ತೆರೆದ ಮೈದಾನದಲ್ಲಿ ಬಂಟರ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ವಿಶ್ವ ಬಂಟರ ಸಂಘದ ಸಂಚಾಲಕ ಶಿವಪ್ರಸಾದ್ ಹೆಗ್ಡೆ, ಉಪ ಸಂಚಾಲಕ ದಿನೇಶ್ ಹೆಗ್ಡೆ, ನಿಕಟಪೂರ್ವ ಅಧ್ಯಕ್ಷ ಜಯರಾಜ್ ಹೆಗ್ಡೆ, ಪೋಷಕರಾದ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಡಾ. ರೋಶನ್ ಶೆಟ್ಟಿ, ಪುರುಷೋತ್ತಮ್.ಪಿ.ಶೆಟ್ಟಿ, ಆರೂರು ಶ್ರೀಧರ್ ಶೆಟ್ಟಿ, ಸುಧೀರ್ ಕುಮಾರ್ ಶೆಟ್ಟಿ, ಮನೋಹರ್.ಎಸ್. ಶೆಟ್ಟಿ, ದಿವಾಕರ್ ಶೆಟ್ಟಿ ಕೊಡವೂರು, ಮಟ್ಟಾರ್ ರತ್ನಾಕರ್ ಹೆಗ್ಡೆ, ಡಾ. ಭಾಸ್ಕರ್ ಶೆಟ್ಟಿ ಬೆಳ್ಳೆ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ, ನವೀನ್ ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ
ಐಕಳ ಹರೀಶ್ ಶೆಟ್ಟಿ ಸ್ವಾಗತಿಸಿದರು. ಸತೀಶ್ ಶೆಟ್ಟಿ ಚಿತ್ರಾಪುರ ಕಾರ್ಯಕ್ರಮ ನಿರೂಪಿಸಿದರು.

spot_img

More articles

LEAVE A REPLY

Please enter your comment!
Please enter your name here