ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಅಜಿತ್ ಪವಾರ್ ಸಹಿತ ಆರು ಮಂದಿ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಅಜಿತ್ ಪವಾರ್ ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸಲು ಸಾಮಾನ್ಯವಾಗಿ ಬಳಸುವ ಸಣ್ಣ ವಿಮಾನ ಇದಾಗಿತ್ತು. ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನವು, ವಿಮಾನ ನಿಲ್ದಾಣ ತಲುಪುವ ಮುನ್ನವೇ ಹೊಲವೊಂದರಲ್ಲಿ ಪತನಗೊಂಡು ಭೀಕರ ಅಪಘಾತಕ್ಕೆ ಒಳಗಾಗಿದೆ.
ವಿಮಾನ ದುರಂತ:ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತ್ಯು

