Friday, February 6, 2026

ಉಡುಪಿ: ಚಲಿಸುತ್ತಿದ್ದ ಬೈಕ್ ನಿಂದ ಬಿದ್ದು ಮಹಿಳೆ ಮೃತ್ಯು

Must read

ಉಡುಪಿ: ಚಲಿಸುತ್ತಿದ್ದ ಬೈಕ್ ನಿಂದ ಬಿದ್ದು ಸಹಸವಾರೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಜಾಯಿ ವೀಲ್ ಅಲೈನ್‌ಮೆಂಟ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಬಾಗೀರಥಿ(53) ಎಂದು ಗುರುತಿಸಲಾಗಿದೆ. ರಜತ್ ಆಚಾರ್ಯ ಎಂಬವರು ತನ್ನ ಬೈಕಿನಲ್ಲಿ ತಾಯಿ ಬಾಗೀರಥಿ ಅವರನ್ನು ಕುಳ್ಳಿರಿಸಿಕೊಂಡು ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದರು. ಕಿನ್ನಿಮುಲ್ಕಿ ಸಮೀಪ ಬೈಕ್ ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಸಹ ಸವಾರೆ ಭಾಗೀರಥಿ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here