Monday, April 20, 2026

ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಪುನರಾಯ್ಕೆ

Must read

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಮುಹಮ್ಮದ್ ಶರೀಫ್ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿ ಫೋರ್ ಚಾನೆಲ್‌ನ ಕೆ.ಎಂ. ಖಲೀಲ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಸಂಜೆ ಪ್ರಭ ಪತ್ರಿಕೆಯ ಹರೀಶ್ ಪೂಜಾರಿ, ಕೋಶಾಧಿಕಾರಿಯಾಗಿ ಮಾಧ್ಯಮ ಬಿಂಬ ಪತ್ರಿಕೆಯ ಸತೀಶ್ ಎಚ್. ಶೆಟ್ಟಿ, ಕಾರ್ಯದರ್ಶಿಯಾಗಿ ಉದಯವಾಣಿಯ ಜಗದೀಶ್ ಮತ್ತು ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ನಮ್ಮ ಟಿವಿಯ ಅರುಣ್ ಭಟ್, ಉದಯವಾಣಿಯ ಅವಿನಾಶ್ ಬಿ., ಮಾಧ್ಯಮ ಬಿಂಬದ ಹರೀಶ್ ಆಚಾರ್ಯ, ಪ್ರಜಾವಾಣಿಯ ವಾಸುದೇವ ಭಟ್ ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸಹಕರಿಸಿದರು.

spot_img

More articles

LEAVE A REPLY

Please enter your comment!
Please enter your name here