Friday, February 20, 2026

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುರುವಾರದಿಂದ ರಮಝಾನ್ ಉಪವಾಸ ಆರಂಭ

Must read

ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.
ಉಳ್ಳಾಲ ಖಾಝಿ ಎ.ಪಿ ಅಬೂಬಕ್ಕರ್ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಳಿ ಮುಸ್ಲಿಯಾ‌ರ್ ತಿಳಿಸಿರುತ್ತಾರೆಂದು ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.

spot_img

More articles

LEAVE A REPLY

Please enter your comment!
Please enter your name here