ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ. 25ರಂದು ಜಿಲ್ಲೆಗೆ ಆಗಮಿಸಿ, ಕಾರ್ಕಳ ತಾಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಫೆ. 25ರ ಬೆಳಿಗ್ಗೆ 11.30ರಿಂದ ಕಾರ್ಕಳ ಕಾಡಬೆಟ್ಟುವಿನಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆ, ಅನಂತರ ಕುಕ್ಕುಂದೂರಿನಲ್ಲಿ ಮಹಾತ್ಮಗಾಂಧಿ ವಸತಿ ಶಾಲೆಯ ಕಿಸಾನ್ ಸಭಾಂಗಣ ಉದ್ಘಾಟನೆ ಹಾಗೂ ಶಾಲೆಯ 35ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಅನಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಅನಂತರ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ: ಫೆ. 25ರಂದು ಕಾರ್ಕಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
More articles

