Friday, April 24, 2026

ಖಾಲಿಯಿರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು-ಮುಖ್ಯಮಂತ್ರಿ ಸಿದ್ದರಾಮಯ್ಯ

Must read

ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಕಾರ್ಕಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.

ಆನೆದಾಳಿ:ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ:

ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಮಾದಕವಸ್ತುಗಳ ನಿಗ್ರಹ
ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.

ಕಾನೂನು ಕ್ರಮ:
ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ, ಯಾವುದೇ ಸಂಘಟನೆಗಳು ಕಾನೂನು ವಿರುದ್ಧವಾಗಿ ನಡೆದುಕೊಂಡಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಗ್ಯಾರಂಟಿ ಯೋಜನೆ:
ಗ್ಯಾರಂಟಿಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 52000 ಕೋಟಿ ರೂ.ಗಳನ್ನು ವೆಚ್ಚ ಮಾಡಿದರೂ, ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತಿದೆ. ಈಗಾಗಲೇ 1,20,000 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ನೀಡಲಾಗಿದೆ ಎಂದರು.

ಪರಿಸರವಾದಿಗಳೊಂದಿಗೆ ಚರ್ಚೆ:
ಆಗುಂಬೆ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮತಿ ನೀಡಲಾಗುವುದೇ ಎಂಬುದಕ್ಕೆ ಉತ್ತರಿಸುತ್ತಾ, ಇದಕ್ಕೆ ಸಂಬಂಧಿಸಿದಂತೆ ಪರಿಸರವಾದಿಗಳೊಂದಿಗೆ ಚರ್ಚಿಸಲಾಗುವುದು ಹಾಗೂ ಅನುಮತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಥೀಮ್ ಪಾರ್ಕ್ ಸದ್ಯದಲ್ಲೇ ಪೂರ್ಣ:
ಕಾರ್ಕಳ ಬೈಲೂರಿನಲ್ಲಿರುವ ಪರುಶರಾಮ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಯೋಜನೆಯನ್ನು ಸಧ್ಯದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದರು.
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರ ಪ್ರಕರಣದಬಗ್ಗೆ ಮಾತನಾಡಿ, ಕಾರ್ಖಾನೆಯ ಗುಜರಿ ಮಾರಾಟ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಶಾಸಕರು ಸಚಿವರಾಗಲು ಬಯಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಶಾಸಕರು ಸಚಿವರಾಗಬಯಸುವುದು ತಪ್ಪಲ್ಲ. ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿ ಪದವಿ ನೀಡಬಾರದೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದರು.

spot_img

More articles

LEAVE A REPLY

Please enter your comment!
Please enter your name here