Thursday, March 19, 2026

ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ- ಮುಖ್ಯಮಂತ್ರಿ ಸಿದ್ದರಾಮಯ್ಯ

Must read

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.

spot_img

More articles

LEAVE A REPLY

Please enter your comment!
Please enter your name here