ಉಡುಪಿ: ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಹಾಗೂ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್ ನ ಆಶ್ರಯದಲ್ಲಿ ಶ್ರೀ ಮುಖ್ಯಪ್ರಾಣ ದೇವರ 19 ಅಡಿ ಎತ್ತರದ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇದೇ ಮಾ.31ರಿಂದ ಎಪ್ರಿಲ್ 3ರವರೆಗೆ ಶ್ರೀಕ್ಷೇತ್ರ ಶಂಕರಪುರದಲ್ಲಿ ನಡೆಯಲಿದೆ ಎಂದು ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಿಲಾಮೂರ್ತಿಯನ್ನು ಮಾರ್ಚ್ 14 ರಂದು ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಲ್ಲಿ ಶ್ರೀ ಕ್ಷೇತ್ರಕ್ಕೆ ತರಲಾಗುವುದು. ಮಾರ್ಚ್ 26ರಂದು ಹನುಮ ಜನ್ಮ ಭೂಮಿಯಿಂದ ರಾಮನವಮಿಯಂದು ಹನುಮ ಜ್ಯೋತಿ ಮತ್ತು ಹನುಮ ಧ್ವಜವು ಹೊರಟು ಮಾರ್ಚ್ 29ಕ್ಕೆ ಉಡುಪಿ ತಲುಪಲಿದೆ. ಉಡುಪಿ ಜೋಡುಕಟ್ಟೆಯಿಂದ ಭವ್ಯ ಮೆರವಣಿಗೆಯಿಂದ ಹನುಮ ಜ್ಯೋತಿ, ಹನುಮಧ್ವಜ ಹಾಗೂ ಅವಧೂತ ಭಗವಾನ್ ನಿತ್ಯಾನಂದ ಸ್ವಾಮಿಯ 200ಕೆಜಿ ತೂಕದ ಪಂಚಲೋಹ ಮೂರ್ತಿಯನ್ನು ಶ್ರೀ ಕ್ಷೇತ್ರಕ್ಕೆ ತರಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಗೀತಾಂಜಲಿ ಎಂ. ಸುವರ್ಣ, ಅಭಿರಾಜ್ ಎಂ. ಸುವರ್ಣ, ಸುನಿಲ್ ಕೆ.ಆರ್, ವಿಜಯಕೊಡವೂರು, ವೀಣಾ ಎಸ್. ಶೆಟ್ಟಿ ಇದ್ದರು.
ಶ್ರೀ ಕ್ಷೇತ್ರ ಶಂಕರಪುರ: ಮಾ.31ರಿಂದ ಶ್ರೀ ಮುಖ್ಯಪ್ರಾಣ ದೇವರ ಶಿಲಾಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
More articles

