Sunday, March 15, 2026

ಮಾ.14ರಂದು ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

Must read

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದೆ. ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು, ಜಿಲ್ಲೆಯ ನಿರಂತರ ಕಡೆಗಣನೆ ಮಾಡಲಾಗುತ್ತಿದೆ. ಇದರ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಉಡುಪಿ ಹಳೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿ ಮಾರ್ಚ್ 14 ರಂದು ಸಂಜೆ 4.30ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹೇಳಿದರು.
ಉಡುಪಿಯಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಉಡುಪಿ ಶಾಸಕರ ಕಚೇರಿಯಿಂದ ಹಳೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದವರೆಗೆ ಪಾದಯಾತ್ರೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಒಂದು ಸಾವಿರಕ್ಕೂ ಅಧಿಕ‌ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಪ್ರಸ್ತುತ ಸಾಲಿನ ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ನೀಡದೆ ಸರ್ಕಾರವು ಜಿಲ್ಲೆಯ ಅಭಿವೃದ್ಧಿಯನ್ನು ತೀವ್ರವಾಗಿ ಕಡೆಗಣಿಸಿದೆ. ಕರಾವಳಿ ಭಾಗದ ಜನರು ಆರೋಗ್ಯ, ಶಿಕ್ಷಣ. ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರೂ, ಈ ಬಾರಿ ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆಗಳು ಅಥವಾ ಮಹತ್ವದ ಅನುದಾನ ಘೋಷಣೆ ಆಗದಿರುವುದು ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ ಎಂದು
ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನ್ಯಾಯಸಮ್ಮತ ಅನುದಾನ ನೀಡಬೇಕು. ಇಲ್ಲವಾದರೆ ಜನರ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಕಿರಣ್ ಕುಮಾರ್, ಪ್ರಭಾಕರ ಪೂಜಾರಿ, ದಿವಾಕರ ಶೆಟ್ಟಿ, ಶ್ರೀವತ್ಸ, ಜಗದೀಶ್ ಆಚಾರ್ಯ ಉಪಸ್ಥಿತರಿದ್ದರು.

spot_img

More articles

LEAVE A REPLY

Please enter your comment!
Please enter your name here