Friday, March 13, 2026

ಶಿರ್ವ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

Must read

ಉಡುಪಿ: ಡೆತ್ ನೋಟ್ ಬರೆದಿಟ್ಟು ಅಡುಗೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಶಂಕರಪುರದ ಸಾಲ್ಮರ ಕ್ಯಾಟ್ರಿಂಗ್ ಸೆಡ್ ಬಳಿ ನಡೆದಿದೆ.
ಗೌತಮ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಸಾಲ್ಮರದ ಕ್ಯಾಟರಿಂಗ್ ಸೆಡ್ ಬಳಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈತ ಅವಿವಾಹಿತನಾಗಿದ್ದು, ಕ್ಯಾಟರಿಂಗ್ ನಲ್ಲಿ ಮುಖ್ಯ ಅಡುಗೆ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಎಲ್ಲರೊಂದಿಗೆ ಬೆರೆಯುತ್ತಿದ್ದ ಗೌತಮ್ ಸ್ಥಳೀಯ ವಿವಿಧ ಸಂಘ-ಸಂಸ್ಥೆಯಲ್ಲಿ ಸಕ್ರಿಯವಾಗಿದ್ದನು. ಘಟನಾ ಸ್ಥಳಕ್ಕೆ ಶಿರ್ವ ಪೊಲೀಸರು‌ ಭೇಟಿಕೊಟ್ಟು ತನಿಖೆ ನಡೆಸುತ್ತಿದ್ದಾರೆ.

spot_img

More articles

LEAVE A REPLY

Please enter your comment!
Please enter your name here