Tuesday, March 17, 2026

ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ

Must read

ಉಡುಪಿ: ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಕಾಪು ತಾಲೂಕಿನ ನಡ್ಸಾಲು ಗ್ರಾಮದ ಜಬ್ಬಾರ್ ಹುಸೇನ್, ಹಿರಿಯಡಕ ಬೊಮ್ಮರಬೆಟ್ಟು ಗ್ರಾಮದ ಸಂದೇಶ್ ಹಾಗೂ ಹಿರಿಯಡಕ ದರ್ಖಾಸು ಪಾಪುಜೆ ನಿವಾಸಿ ಸುಶಾಂತ್ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಮಾರ್ಚ್ 12ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.
ಜಬ್ಬಾರ್ ಹುಸೇನ್ ವಿರುದ್ಧ ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳು ಹಾಗೂ ಮಂಗಳೂರು ನಗರದಲ್ಲಿ ಒಟ್ಟು 16 ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ತೆರೆಯಲಾಗಿದೆ. ಸಂದೇಶ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ತೆರೆಯಲಾಗಿದೆ. ಸುಶಾಂತ್ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್ ತೆರೆಯಲಾಗಿದೆ. ಜಬ್ಬಾರ್ ಹುಸೇನ್ ನನ್ನು ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾ ಠಾಣಾ ವ್ಯಾಪ್ತಿಗೆ, ಸಂದೇಶ್ ನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಶಾಂತ್ ನನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

spot_img

More articles

LEAVE A REPLY

Please enter your comment!
Please enter your name here