Saturday, March 28, 2026

ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳು ಗಡಿಪಾರು

Must read

ಉಡುಪಿ: ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಮಾ.26 ರಂದು ಗಡಿಪಾರು ಆದೇಶ ಜಾರಿಗೊಳಿಸಿದ್ದಾರೆ.
ಶಿರ್ವ ಠಾಣಾ ವ್ಯಾಪ್ತಿಯ ಸೂರ್ಯಗುಡ್ಡೆ, ಕಳತ್ತೂರು ಗ್ರಾಮ ನಿವಾಸಿ ಮಹಮ್ಮದ್ ನೌಫಿಲ್ ವಿರುದ್ಧ ಐದು ಪ್ರಕರಣಗಳು ದಾಖಲಾಗಿದ್ದು, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ. ಹಾಗೆ, ಮಲ್ಪೆ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಆಶೀರ್ವಾದ ನಿವಾಸಿ ಸುಹಾನ್ ಪೂಜಾರಿ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿವೆ.
ಗಡಿಪಾರು ಆದೇಶದ ಅನ್ವಯ, ಮಹಮ್ಮದ್ ನೌಫಿಲ್ ಅವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಹಾನ್ ಪೂಜಾರಿ ಅವರನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್‌ ಮಾಹಿತಿ ನೀಡಿದ್ದಾರೆ.

spot_img

More articles

LEAVE A REPLY

Please enter your comment!
Please enter your name here