Monday, April 20, 2026

ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸಲು ಪರಿಣಾಮಕಾರಿ-ಡಾ. ಎಚ್. ಎಸ್.ಬಲ್ಲಾಳ್

Must read

ಉಡುಪಿ: ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ, ನಾಗಮಂಡಲ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹೆಚ್ಚು ಪರಿಣಾಮಕಾರಿ ಎಂದು ಮಾಹೆ ವಿವಿ ಸಹ ಕುಲಾಧಿಪತಿ ಡಾ. ಎಚ್. ಎಸ್.ಬಲ್ಲಾಳ್ ಹೇಳಿದರು.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೈವಭಕ್ತಿ, ಶಿಕ್ಷಣ ಹಾಗೂ ಆರೋಗ್ಯ ಎಲ್ಲರಿಗೂ ಆವಶ್ಯಕ. ಈ ನಿಟ್ಟಿನಲ್ಲಿ ಡಾ. ಜಿ. ಶಂಕರ್ ಅವರು ಬಡ ರೋಗಿಗಳಿಗೆ ಸಹಾಯಹಸ್ತ ಚಾಚುವ ಬಹುದೊಡ್ಡ ಕಾರ್ಯಗಳನ್ನು ದಶಕಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯದಲ್ಲೂ ಅವರು ಮುಂಚೂಣಿಯಲ್ಲಿದ್ದಾರೆ ಎಂದರು.

ಪರ್ಯಾಯ ಶೀರೂರು ಮಠದ ದಿವಾನರಾದ ಡಾ. ಉದಯ ಕುಮಾರ್‌ಸರಳತ್ತಾಯ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು.
ಬ್ರಹ್ಮಕಲಶೋತ್ಸವ ಗೌರವ ಸಲಹೆಗಾರರೂ ಆದ ಶ್ಯಾಮಿಲಿ ಸಮೂಹ ಸಂಸ್ಥೆಗಳ ಪ್ರವರ್ತಕ ಡಾ. ಜಿ. ಶಂಕರ್, ಉದ್ಯಮಿಗಳಾದ ಕೆ. ಉದಯಕುಮಾರ್‌ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯೋಗೀಶ್ ವಿ. ಶೆಟ್ಟಿ, ವಿನಿತ್ ಅಮೀನ್, ಹರಿಪ್ರಸಾದ್ ರೈ, ದೇವಿಪ್ರಸಾದ್ ಶೆಟ್ಟಿ ಬೆಳಪು, ಗೋಪಾಲ ಸಿ. ಬಂಗೇರ, ತೋಟದ ಮನೆ ದಿವಾಕರ ಶೆಟ್ಟಿ ಗಣನಾಥ ಹೆಗ್ಡೆ ಜಿಲ್ಲಾ ಧಾರ್ಮಿಕ ಪರಿಷತ್ ನ ಕೃಷ್ಣಮೂರ್ತಿ, ಮಲ್ಪೆ ಪರ್ಶಿನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಸದಸ್ಯರಾದ ದಿನೇಶ್ ಪುತ್ರನ್, ಎಂ. ಪ್ರಭಾಕರ ಶೆಟ್ಟಿ, ಶೇಖರ ಶೆಟ್ಟಿ, ವಿದ್ಯಾಲತ ಶೆಟ್ಟಿ, ಶಮಿತಾ ಎಸ್. ಭಂಡಾರಿ, ಸುದೇಶ್ ಶೇಟ್, ರಾಜೇಶ್ ಬಿ. ಉಪಸ್ಥಿತರಿದ್ದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ ಸ್ವಾಗತಿಸಿದರು. ದೇವಳದ ಪ್ರಧಾನ ಅರ್ಚಕ ವಾಸುದೇವ ಉಪಾಧ್ಯ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.

spot_img

More articles

LEAVE A REPLY

Please enter your comment!
Please enter your name here