ಹೊಸದಿಲ್ಲಿ: ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಮೇ 1 ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 993 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯ ನಂತರ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ 3,071.50 ರೂ., ಬೆಂಗಳೂರಿನಲ್ಲಿ 3154 ರೂ. ತಲುಪಿದೆ ಎಂದು ಮೂಲಗಳು ತಿಳಿಸಿವೆ.
ವಾಣಿಜ್ಯ ಸಿಲಿಂಡರ್ ಬೆಲೆ ಗಗನಕ್ಕೇರಿದ್ದರೂ, ಸಾಮಾನ್ಯ ಜನರಿಗೆ ಮತ್ತು ಗೃಹಬಳಕೆದಾರರಿಗೆ ಸದ್ಯಕ್ಕೆ ಯಾವುದೇ ಹೊರೆಯಾಗಿಲ್ಲ. 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬೆಂಗಳೂರಿನಲ್ಲಿ ಇದರ ಬೆಲೆ 915 ರೂಪಾಯಿಯಲ್ಲೇ ಮುಂದುವರಿದಿದೆ. ಕೊನೆಯದಾಗಿ ಮಾರ್ಚ್ 7 ರಂದು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡಲಾಗಿತ್ತು.
ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ದರ ಮತ್ತು ಕರೆನ್ಸಿ ವಿನಿಮಯ ದರಗಳನ್ನು ಆಧರಿಸಿ ಪ್ರತಿ ತಿಂಗಳ ಮೊದಲ ದಿನದಂದು ಎಲ್‌ಪಿಜಿ ಬೆಲೆಗಳನ್ನು ಪರಿಷ್ಕರಿಸುತ್ತವೆ.
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 993 ರೂ. ಏರಿಕೆ
More articles

