Thursday, November 21, 2024

ಮಣಿಪಾಲ: ಎಂಟನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

Must read

ಉಡುಪಿ: 8ನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಫ್ಲ್ಯಾಟ್ ವೊಂದರ 8ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೆರ್ಗಾ ಗ್ರಾಮದ ಕೃತಿಕಾ ಎಂಬವರ ಮಗಳು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ಈಕೆ ಮಣಿಪಾಲ ಮಾಧವಕೃಪಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಳು.

ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಇದೇ ಚಿಂತೆಯಲ್ಲಿ ಸರಳೇಬೆಟ್ಟುವಿನ ಹೈಪಾಯಿಂಟ್ ಹೈಟ್ಸ್ ಫ್ಲ್ಯಾಟ್ ನ ಎಂಟನೇ ಮಹಡಿಯಿಂದ ನ.5ರಂದು ಬೆಳಿಗ್ಗೆ ಹಾರಿದ್ದಳು. ತಕ್ಷಣವೇ ಮನೆಯವರು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ಞಾ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

spot_img

More articles

LEAVE A REPLY

Please enter your comment!
Please enter your name here