Friday, May 15, 2026

ತಮಿಳುನಾಡಿನಲ್ಲಿ ವಿಜಯ್ ಪರ್ವ- ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಳಪತಿ

Must read

ಉಡುಪಿ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಸುಮಾರು ಆರು ದಶಕಗಳ ಆಡಳಿತ ಅಂತ್ಯಗೊಂಡಿದೆ.
234 ಸದಸ್ಯರ ವಿಧಾನಸಭೆಯಲ್ಲಿ 120 ಶಾಸಕರ ಬೆಂಬಲ ಪಡೆದ ಬಳಿಕ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಶನಿವಾರ ವಿಜಯ್ ಅವರನ್ನು ನಿಯೋಜಿತ ಮುಖ್ಯಮಂತ್ರಿಯಾಗಿ ನೇಮಿಸಿ ಸರ್ಕಾರ ರಚಿಸಲು ಆಹ್ವಾನಿಸಿದರು.
ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಆರಂಭವಾದ ಸಮಾರಂಭದಲ್ಲಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್‌ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಮಾರಂಭದಲ್ಲಿ ಭಾಗವಹಿಸಿದರು

spot_img

More articles

LEAVE A REPLY

Please enter your comment!
Please enter your name here