Thursday, May 14, 2026

ಮೇ 14ರಿಂದ ದೊಡ್ಡಣಗುಡ್ಡೆಯಲ್ಲಿ ಮಾವು ಮೇಳ

Must read

ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ಮೇ 14 ರಿಂದ 17 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.
ಮೇ 14ರಂದು ಬೆಳಿಗ್ಗೆ 11 ಗಂಟೆಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಬೆಂಗಳೂರು ತೋಟಗಾರಿಕೆ ಇಲಾಖೆಯ ನಿರ್ದೇಶಕ ಇಬ್ರಾಹಿಂ ಮೈಗೂರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ತೋಟಗಾರಿಕೆ ಅಪರ ನಿರ್ದೇಶಕರಾದ ಡಾ. ಎಸ್ ನಂದಾ, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಬಾದಾಮಿ, ಮಲ್ಲಿಕಾ, ಮಲಗೋವಾ, ಇಮಾಮ್ ಪಸಂದ್, ದಶೇರಿ, ಸಕ್ಕರೆಗುತ್ತಿ, ಕಾಲಪ್ಪಾಡಿ, ಸಿಂಧೂರ ಮೊದಲಾದ ತಳಿಗಳ ಮಾವುಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ.

spot_img

More articles

LEAVE A REPLY

Please enter your comment!
Please enter your name here